Breaking News

ಪಾಕಿಸ್ತಾನದಲ್ಲಿ ಭೀಕರ ಮಳೆಗೆ 937 ಜನರು ಸಾವು


ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸುರಿದ ಭೀಕರ ಮಳೆ ಹಾಗೂ ಪ್ರವಾಹದಿಂದ ಇದುವರೆಗೆ 343 ಮಕ್ಕಳು ಸೇರಿದಂತೆ 937 ಜನರು ಸಾವನ್ನಪ್ಪಿದ್ದಾರೆ. ಸದ್ಯ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.

ಜೂನ್ 14 ರಿಂದ ಸುರಿಯುತ್ತಿರುವ ಮಳೆಯಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಇಲ್ಲಿಯವರೆಗೆ ಸಿಂಧ್ ಪ್ರಾಂತ್ಯದಲ್ಲಿ 306 ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಬಲೂಚಿಸ್ತಾನದಲ್ಲಿ 234, ಖೈಬರ್ ಪಂಖ್ತುಂಖ್ವಾದಲ್ಲಿ 185 ಹಾಗೂ ಪಂಜಾಬ್ ಪ್ರಾಂತ್ಯದಲ್ಲಿ 165 ಜನರು ಸಾವನ್ನಪ್ಪಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 37 ಜನರು ಸಾವನ್ನಪ್ಪಿದ್ದು, ಸುಮಾರು 3 ಕೋಟಿ ಜನರು ನಿರಾಶ್ರಿತಾಗಿದ್ದಾರೆ ಎಂದು ವರದಿಯಾಗಿದೆ.

ಭೀಕರ ಪ್ರವಾಹದ ಹಿನ್ನೆಲೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರಿಫ್ ವಾರ್ ರೂಮ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಇದು ದೇಶಾದ್ಯಂತ ಪ್ರವಾಹದಿಂದ ನಲುಗಿರುವ ಜನರಿಗೆ ಪರಿಹಾರ ನೀಡುವ ಕಾರ್ಯ ಮಾಡುತ್ತದೆ ಎನ್ನಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *