Breaking News

ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಡಿಕೆಶಿ


ಬೆಂಗಳೂರು: ಬಿಡಿಎ ಅಭಿವೃದ್ಧಿಪಡಿಸಿದ ಆರ್‌ಎಂವಿ ಬಡಾವಣೆಯಲ್ಲಿ ಸುಪ್ರೀಂಕೋರ್ಟ್‌ ಆದೇಶ ಉಲ್ಲಂಘಿಸಿ ಬದಲಿ ನಿವೇಶನ ಪಡೆದಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು.

ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ‘ರಾಜಕೀಯ ಒತ್ತಡ ಇಲ್ಲದೇ ಯಾವುದೇ ಅಧಿಕಾರಿಗೂ ಏನನ್ನೂ ಮಾಡಲು ಸಾಧ್ಯವಿಲ್ಲ. ಫಲಾನುಭವಿಗಳು ಮೊದಲು ನೈತಿಕ ಹೊಣೆ ಹೊರಬೇಕು. ಫಲಾನುಭವಿಗಳು, ಸರ್ಕಾರದ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವವರು ಮೊದಲು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಮಸ್ಯೆಯನ್ನು ದೊಡ್ಡದು ಮಾಡಿಕೊಳ್ಳುವ ಮುನ್ನ ಫಲಾನುಭವಿಗಳನ್ನು ಸಂಪುಟದಿಂದ ಕೈಬಿಡಬೇಕು’ ಎಂದು ಆಗ್ರಹಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *