Breaking News

ವಾಯುಭಾರ ಕುಸಿತ : ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ


ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ.

ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಕರ್ನಾಟಕ ಮಾತ್ರವಲ್ಲದೆ ನೆರೆಯ ರಾಜ್ಯಗಳಲ್ಲೂ ಮಳೆಯ ಅಬ್ಬರ ಜೋರಾಗಿದೆ. ಬೆಂಗಳೂರಿನಲ್ಲೂ ಕಳೆದ 2 ದಿನಗಳಿಂದ ಮಳೆ ಹೆಚ್ಚಾಗಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಬೆಂಗಳೂರು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ, ಮೈಸೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ.

ಕರ್ನಾಟಕದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *