Breaking News

ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ


ಬೆಂಗಳೂರು: ನಗರದ ಹಲವೆಡೆ ಗಾಳಿ ಸಹಿತ ಮಳೆ  ಪುನಾರಂಭವಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತ್ಯಾಗರಾಜನಗರ, ಬಸವನಗುಡಿ, ಬನಶಂಕರಿ, ಕಾರ್ಪೊರೇಷನ್​, ಕೆ.ಆರ್.ಮಾರ್ಕೆಟ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಮತ್ತು ಶಾಂತಿನಗರ ಸೇರಿದಂತೆ ಹಲವೆಡೆ ಮಳೆ ಸುರಿಯುತ್ತಿದೆ. ಮಳೆಗೆ ವಾಹನ ಸವಾರರು ಪರದಾಡುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ನೈರುತ್ಯ ಮುಂಗಾರು ಚುರುಕಾಗಿರುವ ಹಿನ್ನೆಲೆ ರಾಜ್ಯದಲ್ಲಿ ಇನ್ನು 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರವಾಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿಗೂ ಹವಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿಗೆ ಇನ್ನು 5 ದಿನ ಮಳೆ ಇರಲಿದ್ದು, ಇಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿಗೆ ಮುಂಗಾರು ಚುರುಕಾಗಿದ್ದು ಯಲ್ಲೋ ಅಲರ್ಟ್ ನೀಡಿದ್ದು, ಕೆಲವೊಮ್ಮೆ ಅತಿಭಾರಿ ಮಳೆಯಾಗುವ ಸಾಧ್ಯಾತೆ ಇದೆ ಎಂದು ಟಿವಿ9ಗೆ ಹವಾಮನಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *