Breaking News

ನಾನೇನಿದ್ದರೂ ಕಾನೂನಿನ ಪರ : ಸಿದ್ದರಾಮಯ್ಯ



ಪಾಂಡವಪುರ/ಮೈಸೂರು: ರಾಜ್ಯ ಸರ್ಕಾರದ ಮೇಲಿನ ಶೇ.40ರಷ್ಟುಕಮಿಷನ್‌ ವಿಚಾರವಾಗಿ ನಾನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಸೇರಿ ಯಾವ ಗುತ್ತಿಗೆದಾರರ ಪರವೂ ನಿಲ್ಲುತ್ತಿಲ್ಲ, ನಾನೇನಿದ್ದರೂ ಕಾನೂನಿನ ಪರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಜತೆಗೆ, ಬಿಜೆಪಿಯವರು ಪ್ರಾಮಾಣಿಕರೇ ಆಗಿದ್ದರೆ ಕಮಿಷನ್‌ ಆರೋಪವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಿ ಎಂದು ಪುನರುಚ್ಚರಿಸಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ಕ್ರಮ ಕೈಗೊಳ್ಳುವ ಮುಖ್ಯಮಂತ್ರಿ ಹೇಳಿಕೆ ಕುರಿತು ಮಂಡ್ಯ ಜಿಲ್ಲೆಯ ಪಾಂಡವಪುರ ಹಾಗೂ ಮೈಸೂರಲ್ಲಿ ಶುಕ್ರವಾರ ಮಾತನಾಡಿದ ಅವರು, ನ್ಯಾಯಾಂಗ ತನಿಖೆ ಮಾಡಿದರೆ ದಾಖಲೆ ಕೊಡುವುದಾಗಿ ಕೆಂಪಣ್ಣ ಹೇಳಿದ್ದಾರೆ. ಸರ್ಕಾರದ ಕೆಳಗೆ ಗುತ್ತಿಗೆದಾರರು ಕೆಲಸ ಮಾಡಬೇಕು. ಇದೇ ಕಾರಣಕ್ಕೆ ಅವರು ಹೆದರಿದ್ದು, ತನಿಖೆ ವೇಳೆ ದಾಖಲೆ ಕೊಡುತ್ತೇನೆ ಎಂದು ಹೇಳುತ್ತಿದ್ದಾರೆ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *