ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ “ಕಾಂಗ್ರೆಸ್ ಮುಕ್ತ ಭಾರತ”ದ ಘೋಷಣೆಯಂತೆ ಶೀಘ್ರವೇ ಕಾಂಗ್ರೆಸ್ ಪಕ್ಷವು ಅತ್ಯಂತ ಹೀನಾಯ ಸ್ಥಿತಿಗೆ ತಲುಪಲಿದೆ ಎಂದು ಶಾಸಕ ರವಿಸುಬ್ರಹ್ಮಣ್ಯ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮತೀಯ ಓಲೈಕೆಗಾಗಿ ಹಿಂದೂ ಹಬ್ಬಗಳ ಆಚರಣೆಗೆ ಕಾಂಗ್ರೆಸ್ ಅಡ್ಡಿ ಮಾಡುತ್ತಿತ್ತು . ಒಂದು ಕಾಲದಲ್ಲಿ ದೇಶವನ್ನೇ ಆಳುತ್ತಿದ್ದ ಕಾಂಗ್ರೆಸ್ ಪಕ್ಷವು ಈಗ ಇವತ್ತು ಕೇವಲ ಎರಡು ರಾಜ್ಯಗಳಲ್ಲಿ ಸ್ವಂತ ಬಲದಲ್ಲಿ ಆಡಳಿತ ನಡೆಸುತ್ತಿದೆ ಎಂದು ವಿವರಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ನೇತಾರ ಗುಲಾಂ ನಬಿ ಆಜಾದ್ ಅವರು ಪಕ್ಷ ತೊರೆದು ತಮ್ಮದೇ ಆದ ಚಿಂತನೆಯೊಂದಿಗೆ ಹೊರಕ್ಕೆ ಹೋಗುತ್ತಿದ್ದಾರೆ. ಕಾಂಗ್ರೆಸ್ ಪಕ್ಷವು ಕೆಲವರಿಗಷ್ಟೇ ಸೀಮಿತ ಪಕ್ಷವಾಗಿದೆ. ಯಾವುದೋ ಗುಮಾಸ್ತರು ಮತ್ತುಗನ್ ಮ್ಯಾನ್‍ಗಳು ನಡೆಸುವ ಪಕ್ಷ ಅದಾಗಿದೆ ಎಂದೂ ಅವರು ಹೇಳಿದ್ದಾರೆ. ಕಪಿಲ್ ಸಿಬಲ್, ದಿಗ್ವಿಜಯ್ ಸಿಂಗ್, ಮಣಿಶಂಕರ್ ಅಯ್ಯರ್, ಹಾರ್ದಿಕ್ ಪಟೇಲ್ ಅವರಂಥ ಅನೇಕರು ಪಕ್ಷ ತ್ಯಜಿಸಿದ್ದಾರೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

