ರಾಯಚೂರು: ಹಿಂದುಳಿದಿರುವಿಕೆ, ಮಹಾತ್ವಕಾಂಕ್ಷಿ ಜಿಲ್ಲೆ ಮತ್ತು ಅಪೌಷ್ಠಿಕತೆ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಉನ್ನತ ಆರೋಗ್ಯ ಸಂಸ್ಥೆ ಅಗತ್ಯವಾಗಿದ್ದು, ಈ ಎಲ್ಲಾ ಅಂಶಗಳನ್ನು ಪರಿಗಣಿಸಿ, ಸಮೀಕ್ಷೆ ನಡೆಸಿ, ಏಮ್ಸ್ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬಸವರಾಜ ಬೊಮ್ಮಾಯಿ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾದ ಸಿರಿಧಾನ್ಯ ಮೇಳ ಕಾರ್ಯಕ್ರಮ ಉದ್ಘಾಟನೆ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು. ಇತ್ತೀಚಿಗೆ ದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಸಚಿವರನ್ನು ಭೇಟಿಯಾಗಿ ಏಮ್ಸ್ ಕುರಿತು ಚರ್ಚಿದ್ದೇನೆ. ರಾಯಚೂರು ಜಿಲ್ಲೆಯ ಸಮಸ್ಯೆಗಳ ಬಗ್ಗೆಯೂ ಅವರ ಗಮನಕ್ಕೆ ತರಲಾಗಿದೆ. ಈ ಜಿಲ್ಲೆ ಮಹಾತ್ವಕಾಂಕ್ಷಿ ಜಿಲ್ಲೆಗಳಲ್ಲೊಂದಾಗಿದೆ. ಅಲ್ಲದೆ, ಹಿಂದುಳಿದ ಪ್ರದೇಶವಾಗಿದ್ದು, ಅಪೌಷ್ಟಿಕತೆ ಸಮಸ್ಯೆ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಆರೋಗ್ಯ ಸಂಸ್ಥೆಯ ಅಗತ್ಯವಿದೆ. ಕಾರಣ ಏಮ್ಸ್ ಸ್ಥಾಪನೆ ಸಂದರ್ಭದಲ್ಲಿ ಇವುಗಳನ್ನು ಪರಿಗಣಿಸುವಂತೆ ಮನವಿ ಮಾಡಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

