ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 4 ದಿನ ಇನ್ನಷ್ಟು ಬಿರುಸುಗೊಳ್ಳಲಿದೆ.
ಶನಿವಾರವೂ ವಿವಿಧ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಿದ್ದು, ಮಾನ್ವಿ 19, ಮದ್ದೂರು 10, ಶಿರಾ 9, ರಾಮನಗರ 9, ರಾಯಚೂರು, ಬಳ್ಳಾರಿಯ ಕೊಟ್ಟೂರು, ಶ್ರೀರಂಗಪಟ್ಟಣ ಮತ್ತು ಬೆಂಗಳೂರು ತಲಾ 7 ಸೆಂಮೀ ಬಿದ್ದಿದೆ. ಚಿಕ್ಕಮಗಳೂರು, ಚಾಮರಾಜನಗರ, ಕೋಲಾರದಲ್ಲಿ ಮುಂದಿನ 4 ದಿನ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರಿನಲ್ಲಿ ಆ.29ರಿಂದ ಆ.31ರವರೆಗೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ಬಳ್ಳಾರಿ, ಗದಗ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನದಲ್ಲಿ ಆ.30 ಮತ್ತು ಆ.31 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

