ನವದೆಹಲಿ: ಕಾಂಗ್ರೆಸ್ ಪಕ್ಷವನ್ನು ಹಾಲಿ ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಮಾತ್ರ ಇದ್ದು, ಪಕ್ಷದ ನಾಯಕತ್ವವನ್ನು ಅವರೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ‘ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಇಂದು ಇಡೀ ಪರಿಸ್ಥಿತಿ ಸ್ಪಷ್ಟವಾಗಿದೆ. ನನ್ನ ವೈಯಕ್ತಿಕ ಅಭಿಪ್ರಾಯ ಎಂದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ವಹಿಸಬೇಕು. ಇದು ಎಲ್ಲಾ ಕಾರ್ಯಕರ್ತರ ಭಾವನೆಯಾಗಿದೆ. ಹಾಲಿ ಇರುವ ಪರಿಸ್ಥಿತಿಯಿಂದ ಪಕ್ಷವನ್ನು ರಾಹುಲ್ ಗಾಂಧಿ ಮಾತ್ರ ಮೇಲಕ್ಕೆತ್ತಬಲ್ಲರು. ಅವರು ಪಕ್ಷವನ್ನು ಒಗ್ಗೂಡಿಸುತ್ತಾರೆ ಮತ್ತು ಬಲಪಡಿಸುತ್ತಾರೆ. ಭಾರತ್ ಜೋಡೋ ಕಾರ್ಯಕ್ರಮದಲ್ಲೂ ಜನರನ್ನು ಒಟ್ಟುಗೂಡಿಸುವ ಸಾಮರ್ಥ್ಯ ಅವರಿಗೆ ಮಾತ್ರ ಇದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

