ನವದೆಹಲಿ: ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿ ಮುಂದಿನ ಎಐಸಿಸಿ ಮುಖ್ಯಸ್ಥರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ನಿಗದಿಪಡಿಸಿತು.
ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಎಣಿಕೆಯ ನಂತರ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪಕ್ಷ ತಿಳಿಸಿದೆ. ಸೆಪ್ಟೆಂಬರ್ 22ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಸೆಪ್ಟೆಂಬರ್ 24 ಮತ್ತು 30ರ ನಡುವೆ ನಾಮಪತ್ರ ಸಲ್ಲಿಸುವ ದಿನಾಂಕ ಇರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

