Breaking News

ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಕೊರೆತೆ ಹಿನ್ನೆಲೆ ಪ್ರತಿಭಟನೆ

ಹುಬ್ಬಳ್ಳಿ: ನಗರದ ಗದಗ ರಸ್ತೆಯ ಶಬರಿ ನಗರ ಮಧರ್ ಥೆರೇಸಾ ಕಾಲೋನಿಯಲ್ಲಿರುವ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದ ಕಾರಣ ಇಂದು ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ, ನಗರದ ರಾಯಣ್ಣ ಸರ್ಕಲ್ ದಿಂದ ತಹಶೀಲ್ದಾರ ಕಚೇರಿ ಮೂಲಕ ಪ್ರತಿಭಟನೆ ಮಾಡಿ, ಸರ್ಕಾರಿ ಶಾಲೆಗಳನ್ನು ಉಳಿಸಿ ಎಂದು ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅಷ್ಟೇ ಅಲ್ಲದೆ ಈ ಶಾಲೆಯಲ್ಲಿ ಮಕ್ಕಳಿಗೆ ಕುಡಿಯುವ ನೀರು ಸೌಲಭ್ಯ, ಶೌಚಾಲಯ ಸೌಲಭ್ಯ, ಶಾಲೆಗೆ ಬಣ್ಣ ಇಲ್ಲ, ಶಾಲೆಯಲ್ಲಿ ಪೀಠೋಪಕರಣಗಳು ಹೀಗೆ ಹಲವಾರು ಸಮಸ್ಯೆಗಳು ಈ ಶಾಲೆಯಲ್ಲಿವೆ. ಆದಷ್ಟು ಬೇಗ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ಕೂಡಲೆ ಈ ಶಾಲೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆಂದು ಎಚ್ಚರಿಕೆ ನೀಡಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *