Breaking News

ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ವತಿಯಿಂದ ವಿವಿಧೆಡೆ ಪಂಥ ಸಂಚಲನ

ಹುಬ್ಬಳ್ಳಿ: ಗಣೇಶ ಚತುರ್ಥಿ ಅಂಗವಾಗಿ ಹುಧಾ ಪೊಲೀಸ್ ಕಮಿಷನರೇಟ್ ಘಟಕದ ಸಿಬ್ಬಂದಿ‌ ನಗರದ ವಿವಿಧೆಡೆ ಪಥಸಂಚಲನ ನಡೆಸಿದರು.

ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಪಥಸಂಚಲನದಲ್ಲಿ ಪೋಲಿಸ್ ಹಲವು ತುಕಡಿಗಳು ಶಿಸ್ತು ಬದ್ದವಾಗಿ ನಡೆದು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಜಾಗೃತಿ ನಡಿಗೆ ನಡೆದರು. ಇದರೊಂದಿಗೆ ನಗರದ ನಾಗರಿಕರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ಪ್ರಯತ್ನ ಮಾಡಿದರು.

ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ನಡೆದ ಪಥಸಂಚಲನ ಚನ್ನಮ್ಮ‌ ವೃತ್ತದಿಂದ ಆರಂಭವಾಗಿ, ಈದ್ಗಾ ಮೈದಾನ, ಲ್ಯಾಮಿಂಗ್ಟನ್ ರಸ್ತೆ, ಕೊಪ್ಪಿಕರ್ ರಸ್ತೆ, ದುರ್ಗದ ಬೈಲ್, ಸಿಬಿಟಿ, ಗಣೇಶಪೇಟೆ ಮುಖಾಂತರ ಸಾಗಿತು.

ಕ್ಷಿಪ್ರ ಕಾರ್ಯಾಚರಣೆ ಪಡೆ, ಸಶಸ್ತ್ರ ಮೀಸಲು ಪಡೆ ಸಿಬ್ಬಂದಿ ಇದ್ದರು. ಕಮಿಷನರ್ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲ ಬ್ಯಾಕೋಡ್ ಹಾಗೂ ಎಸಿಪಿ, ಇನ್’ಸ್ಪೆಕ್ಟರ್’ಗಳು ಪಾಲ್ಗೊಂಡಿದ್ದರು.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *