Breaking News

ಸಿದ್ದರಾಮಯ್ಯ ಅವರ ವಿರುದ್ಧ ಶ್ರೀರಾಮುಲು ತೀವ್ರ ವಾಗ್ದಾಳಿ


ಬೆಂಗಳೂರು: ಬಿಜೆಪಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರು ಹೆಸರಿನಲ್ಲಿ ರಾಮ, ಉಂಡ ಮನೆಗೆ ಪಂಗನಾಮ. ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ.ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ವಾಗ್ದಾಳಿ ನಡೆಸಿದ್ದಾರೆ.

ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ? ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ‌ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ? ಎಂದು ರಾಮುಲು ಸಿದ್ದರಾಮಯ್ಯನವರನ್ನು ಟೀಕಿಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *