Breaking News

ಜಿ.ಪಂ. ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. ನಿಧನ

ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ.

ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಭಾರತೀಯ ಸೇನೆಯಲ್ಲಿ ಮೇಜರ್ ಆಗಿದ್ದ ಡಾ. ಹರ್ಷ, ಸೇನೆಯಲ್ಲಿ ಸೇವೆ ಮುಗಿಸಿ ಗ್ರಾಮೀಣಾಭಿವೃದ್ಧಿ ಇಲಾಖೆ ಸೇವೆಗೆ ಸೇರಿದ್ದರು. ಇವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನ ಅಗಲಿದ್ದಾರೆ. ನಾಳೆ ಮಧ್ಯಾಹ್ನ ಸ್ವ ಗ್ರಾಮ ದಾವಣಗೆರೆ ತಾಲೂಕಿನ ಕಂದಗಲ್ ಗ್ರಾಮದ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *