Breaking News

ಅಪಹರಣ ಪ್ರಕರಣ : ಸಚಿವ ಕಾರ್ತಿಕ್ ಕುಮಾರ್ ರಾಜೀನಾಮೆ


ಪಾಟ್ನ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ ಸಚಿವ ಅಲೋಕ್ ಕುಮಾರ್ ಮೆಹ್ತಾ ಅವರಿಗೆ ಕಬ್ಬು ಉದ್ಯಮ ಸಚಿವಾಲಯದ ಹೆಚ್ಚುವರಿ ಹೊಣೆ ವಹಿಸಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *