Breaking News

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶ



ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು.  ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ.

ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ ಇದ್ದಾರೆ. ತಮ್ಮ ಟ್ವೀಟ್‌ನಲ್ಲಿ ಜೈರಾಮ್ ರಮೇಶ್, ‘ಶ್ರೀಮತಿ ಸೋನಿಯಾ ಗಾಂಧಿಯವರ ತಾಯಿ, ಶ್ರೀಮತಿ ಪಾವೊಲಾ ಮೈನೋ ಅವರು 27 ಆಗಸ್ಟ್ 2022 ರಂದು ಶನಿವಾರ ಇಟಲಿಯಲ್ಲಿ ತಮ್ಮ ಮನೆಯಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು’ ಎಂದು ಮಾಹಿತಿ ನೀಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *