ಚಿತ್ರದುರ್ಗ : ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.
ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ್ದಾರೆ.
ಈ ನಡುವೆ ಮುರುಘಾ ಶರಣರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿರುವ ಚಿತ್ರದುರ್ಗದ ಒಂದನೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯ ವಾದಿ-ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಸದ್ಯ ಅವರನ್ನು ನ್ಯಾಯಾಧೀಶರ ಮುಂದೆ ಕೂಡ ಹಾಜರು ಪಡಿಸಿ, ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ ಅಂತ ಪ್ರಾಥಮಿಕ ಮೂಲಗಳಿಂದ ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

