ಕೋಲಾರ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ.ಮುಳಬಾಗಿಲು ತಾಲೂಕಿನ ಮಣಿಘಟ್ಟೆಮಿಟ್ಟೆ ಗ್ರಾಮದಲ್ಲಿ ರವಳಿ (28) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.ಇವರು ತಮ್ಮ ಹೊಲದಲ್ಲಿ ರಾಗಿ ಬಿತ್ತನೆ ಮಾಡಿದ್ದರು.
ಆದರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೊಲದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಈ ಹಿನ್ನೆಲೆ ನೀರನ್ನು ಹೊರಹಾಕುವ ಸಲುವಾಗಿ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಗೆ ಸಿಡಿಲು ಬಡಿದಿದೆ. ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

