Breaking News

ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ


ನವದೆಹಲಿ: ದೇಶಾದ್ಯಂತ ಸಾಂಕ್ರಾಮಿಕ ರೋಗ ಭೀತಿ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 7,219 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,965 ಜನರು ಸಾವನ್ನಪ್ಪಿದ್ದಾರೆ.ಇನ್ನು ದೇಶದಲ್ಲಿ 56,745 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,65,016 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 25,83,815 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,13,01,07,236 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 3,64,886 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *