Breaking News

ಮಳೆ ಕರಿತು ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ


ರಾಜ್ಯದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ದಿಢೀರ್ ಅಂತ ಸುರಿಯುವ ಮಳೆ ಜನರನ್ನು ಸಂಕಷ್ಟಕ್ಕೆ ಸಿಲುಕುತ್ತಿದೆ.

ಕೆಲವೊಮ್ಮೆ ಬಿಸಿಲು, ಮರುಕ್ಷಣವೇ ಮಳೆ ಸುರಿಯಲು ಪ್ರಾರಂಭಿಸಿದೆ. ಕಳೆದ ಒಂದು ವಾರದಿಂದ ಸುರಿದ ಮಳೆಗೆ ಜಮೀನಿನಲ್ಲೇ ತರಕಾರಿ ಕೊಳೆತ ಹೋಗಿದೆ. ಪರಿಣಾಮ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ದುಪ್ಪಟ್ಟು ಆಗಿದೆ. ಇಂದು ಸಹ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಮಳೆರಾಯ ಜೂಜಾಟ ಆಡುತ್ತಿದ್ದಾನೆ. ಕ್ಷಣ ಕ್ಷಣಕ್ಕೂ ವಾತಾವರಣ ಬದಲಾಗ್ತಿದೆ. ನಿನ್ನೆಯಿಂದ ಬೆಂಗಳೂರಿನಲ್ಲಿ ವರುಣನ ಅಬ್ಬರ ತಗ್ಗಿದೆ.

ಗದಗ, ಧಾರವಾಡ, ಹುಬ್ಬಳ್ಳಿ, ವಿಜಯಪುರ, ಬೆಳಗಾವಿ ಮತ್ತು ಬೀದರ್​ ಗಳಲ್ಲಿಯೂ ಇಂದು ಮಳೆಯಾಗುವ ನಿರೀಕ್ಷೆಗಳಿವೆ. ಇಂದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 29 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​​ ತಾಪಮಾನ ದಾಖಲಾಗಲಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *