ಸುಳ್ಯ : ಹಿರಿಯ ಸಾಹಿತಿ ಹಾಗೂ ಭಾಷಾ ವಿಜ್ಞಾನಿ ಪ್ರೊಫೆಸರ್ ಕೊಡಿ ಕುಶಾಲಪ್ಪ ಗೌಡ ಅವರು ನಿಧನರಾಗಿದ್ದಾರೆ.
ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸುವೆ. ಇವರು ಆಧುನಿಕ ಭಾಷಾ ವಿಜ್ಞಾನ ಹಾಗೂ ಪರಂಪರಾಗತವಾದ ವ್ಯಾಕರಣ ಶಾಸ್ತ್ರದಲ್ಲಿ ಪಾಂಡಿತ್ಯವನ್ನು ಪಡೆದುಕೊಂಡಿದ್ದರು.
ಇವರು ಮೇ 30 ರಂದು 1931 ರಲ್ಲಿ ಕೊಡಗು ಜಿಲ್ಲೆಯ ಉತ್ತರ ಭಾಗದಲ್ಲಿರುವ ಪೆರಾಜೆಯ ಕೋಡಿ ಗ್ರಾಮದಲ್ಲಿ ಜನಿಸಿದರು. ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿರುವ ಇವರು ಮದ್ರಾಸ್ ವಿಶ್ವವಿದ್ಯಾಲಯದಲ್ಲಿ ಪದವಿ ಸ್ನಾತಕೋತ್ತರ ಪದವಿ ಮತ್ತು ಅಣ್ಣಮಲೈ ವಿಶ್ವವಿದ್ಯಾಲಯದಲ್ಲಿ ಭಾಷಾ ವಿಜ್ಞಾನದಲ್ಲಿ ಡಿಪ್ಲೋಮೋ ಪಿಎಚ್ಡಿ ಪದವೀಧರರಾಗಿದ್ದಾರೆ. ಇವರಿಗೆ ಅಣ್ಣಾಮಲೈ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ನೀಡಲಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

