ಹುಬ್ಬಳ್ಳಿ: ಮನನೊಂದ ಯುವಕನೊಬ್ಬ ತನ್ನ ಕುತ್ತಿಗೆಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗಿರಣಿಚಾಳದಲ್ಲಿ ನಡೆದಿದೆ.ಗಿರಣಿಚಾಳದ ನಿರೂಪಾದಿ ಬಂಡಾರಿ ಎಂಬ ಯುವಕ ತನ್ನ ಮನೆಯಲ್ಲಿ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮನೆಯ ಅಕ್ಕಪಕ್ಕದವರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೆಲ ದಿನಗಳ ಹಿಂದೆ ಒಂದೇ ಬೈಕನಲ್ಲಿ ತನ್ನ ಸ್ನೇಹಿತನ ಜೊತೆಗೆ ಹೋಗುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸ್ನೇಹಿತನನ್ನು ಕಳೆದುಕೊಂಡಿದ್ದಾನೆ ಹಾಗೂ ಮದುವೆಗೆ ಹೆಣ್ಣು ಸಿಕ್ಕಿಲ್ಲ ಅನ್ನೋ ಕಾರಣಕ್ಕೆ ಜೀವನದಲ್ಲಿ ಜಿಗಪ್ಸೆಗೊಂಡು ಈ ಒಂದು ಕೃತ್ಯಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಇನ್ನು ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕಿಮ್ಸ್ ಆಸ್ಪತ್ರೆಗೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

