Breaking News

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ


ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಕರಾವಳಿ, ಮಲೆನಾಡು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಸೆ. 9ರವರೆಗೆ ಮಳೆಯಾಗಲಿದೆ. ಈಗಾಗಲೇ ಭಾರೀ ಮಳೆಯಿಂದ ತತ್ತರಿಸಿರುವ ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಧಾರಾಕಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *