ಬೆಂಗಳೂರು : ಬಡವರು ಹೆಚ್ಚಾಗಿ ವಾಸಿಸುವ ಹಾಗೂ ವಲಸೆ, ಭೂಮಿರಹಿತ ಕಾರ್ಮಿಕರು ಹೆಚ್ಚಾಗಿರುವ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ 268.98 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯ’ ಅಡಿ ಗ್ರಾಮೀಣ ಭಾಗಗಳಲ್ಲಿ 1,655 ಹಾಗೂ ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರ ಸ್ಥಾಪನೆಯಾಗಲಿವೆ. ತನ್ಮೂಲಕ ರಾಜ್ಯದ ಸುಮಾರು 16 ಲಕ್ಷ ಕುಟುಂಬಗಳ ಮಕ್ಕಳ ಪೌಷ್ಟಿಕಾಂಶ ಮತ್ತು ಶಾಲೆ ಪೂರ್ವ ಶಿಕ್ಷಣಕ್ಕೆ ಅನುಕೂಲವಾಗಲಿದೆ. ಜತೆಗೆ 8100 ಮಹಿಳೆಯರಿಗೆ ಉದ್ಯೋಗಾವಕಾಶವೂ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

