ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ (ಜೆಇ)ಗೆ ಇತ್ತೀಚೆಗೆ ನಡೆದ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಮತ್ತೊಬ್ಬ ಆರೋಪಿಯನ್ನು ಶನಿವಾರ ಬಂಧಿಸಲಾಗಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 14ಕ್ಕೇರಿದೆ.
ಗೋಕಾಕ ತಾಲೂಕಿನ ಅರಂಬಾವಿಯ ಗಿರಿಯಪ್ಪ ಅಲಿಯಾಸ್ ಗಿರೀಶ್ ಫಕೀರಪ್ಪ ಬನಾಜ್ (22) ಬಂಧಿತ. ವೃತ್ತಿಯಲ್ಲಿ ಜ್ಯೂನಿಯರ್ ಲೈನ್‌ಮ್ಯಾನ್ ಆಗಿ ಸೇವೆ ಸಲ್ಲಿಸುತ್ತಿದ್ದ ಈತ ಹುಕ್ಕೇರಿ ತಾಲೂಕಿನ ಶಿರಹಟ್ಟಿಬಿ.ಕೆ.ಗ್ರಾಮದಲ್ಲಿ ಪ್ರಶ್ನೆಗಳಿಗೆ ಉತ್ತರಗಳನ್ನು ತಯಾರಿಸಿ ಅಭ್ಯರ್ಥಿಗಳಿಗೆ ಅದನ್ನು ಹೇಳಲು ನೆರವು ನೀಡಿದ್ದ ಎಂಬ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

