ಹುಬ್ಬಳ್ಳಿ;ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಬಳಿ ಬೆಣ್ಣೆಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಶವ ಇಂದು ಪತ್ತೆಯಾಗಿದೆ. ತಡಹಾಳ ಗ್ರಾಮದ ಸದಾನಂದ ಮಾದರ (32) ಎಂಬಾತ ಕಳೆದ ಶುಕ್ರವಾರ ಬೈಕ್ ನಲ್ಲಿ ಹಳ್ಳ ದಾಟಲು ಹೋದಾಗ ನಡೆದ ಘಟನೆ ನಡೆದಿತ್ತು.
ಬೈಕ್ ಸಮೇತ ಕೊಚ್ಚಿ ಹೋಗಿದ್ದ ಸದಾನಂದ ಇಂದು ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದು, ನಿರಂತರ ಕಾರ್ಯಾಚರಣೆ ಆರಂಭಿಸಿದ್ದ ಎನ್ ಡಿ ಆರ್ ಎಫ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಸಲಾಗಿತ್ತು.
ಸದ್ಯ ಶವವನ್ನ ಮೇಲೆತ್ತಿದ್ದು ಕುಟುಂಬಸ್ತರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ನವಲಗುಂದ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದ ಬಳಿ ಇದೇ ಬೆಣ್ಣೆ ಹಳ್ಳಕ್ಕೆ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದ ಆನಂದ ಹೊಸಗೌಡರ ಶವ ಇನ್ನು ಪತ್ತೆಯಾಗಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

