ನಾಗಮಂಗಲ : ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ರಾಜ್ಯದಲ್ಲಿ 80 ರಿಂದ 90 ಸ್ಥಾನಗಳನ್ನು ಗೆಲ್ಲಲು ಯಾವುದೇ ಸಮಸ್ಯೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ತಾಲೂಕಿನ ದೊಡ್ಡಚಿಕ್ಕನಹಳ್ಳಿಯಲ್ಲಿ ಭಾನುವಾರ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದಿಲ್ಲ.
ಕಾರ್ಯಕರ್ತರು, ಮುಖಂಡರು ಹಾಗೂ ಜನ ಸಾಮಾನ್ಯರ ಆಶೀರ್ವಾದವಿದೆ. ಆದ್ದರಿಂದ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಶಕ್ತಿ ಏನೆಂಬುದು ವಿರೋಧಿಗಳಿಗೆ ಗೊತ್ತಾಗಲಿದೆ ಎಂದರು.
ಜೆಡಿಎಸ್ ಪಕ್ಷ ನಾಡಿನ ಜನರಿಗೆ ಉಚಿತ ಶಿಕ್ಷಣ, ಆರೋಗ್ಯ, ರೈತರು ಸಾಲ ಮಾಡದ ಹಾಗೆ ಚೈತನ್ಯ, ಪ್ರತಿ ಕುಟುಂಬಕ್ಕೆ ಒಂದು ಮನೆ, ಯುವಕರಿಗೆ ಉದ್ಯೋಗ ಕಲ್ಪಿಸುವ ಪಂಚರತ್ನ ಕಾರ್ಯಕ್ರಮ ಜಾರಿಗೆ ತರಲು ಮುಂದಾಗಿದೆ. ಇದಕ್ಕಾಗಿ ನನ್ನ ಆರೋಗ್ಯ ಲೆಕ್ಕಿಸದೇ ರಾಜ್ಯಾದ್ಯಂತ ಓಡಾಟ ನಡೆಸುತ್ತಿದ್ದೇನೆ ಎಂದರು. ಈಗಾಗಲೇ ರಾಜ್ಯದ ಜನರು ನಮ್ಮ ಪರವಾಗಿ ಕೆಲಸ ಮಾಡುವ ಜೆಡಿಎಸ್ ಪಕ್ಷಕ್ಕೆ ಮತ ಕೊಡಬೇಕು ಎನ್ನುವ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಜನರ ಕಷ್ಟ, ಸುಖಗಳಿಗೆ ಸ್ಪಂದಿಸುವುದು ಜೆಡಿಎಸ್‌ನಿಂದ ಮಾತ್ರ ಎಂಬುದನ್ನು ಅರಿತಿದ್ದಾರೆ ಎಂದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ವಿಷಯದಲ್ಲಿ ನಿರ್ಲಕ್ಷ್ಯ ವಹಿಸುತ್ತಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

