ಅಂಕೋಲಾ: ತಾಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಬೊಮ್ಮಯ್ಯ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ತಮ್ಮ ಸ್ವಗೃಹ ಸೂರ್ವೆಯಲ್ಲಿ ನಿಧನ ಹೊಂದಿದರು. ಕಳೆದ 2-3 ದಿನಗಳ ಹಿಂದಷ್ಟೇ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಕಾರವಾರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು, ವೆಂಟಿಲೇಟರ್ ಚಿಕಿತ್ಸೆ ನೀಡಿ ನಂತರ ಮನೆಗೆ ಕರೆದುಕೊಂಡು ಬರಲಾಗಿತ್ತು.
ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಜೈಲುವಾಸ ಅನುಭವಿಸಿರುವ ಅವರನ್ನು ಇತ್ತೀಚೆಗೆ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಮಾಜಿ ಶಾಸಕರು, ಹಲವಾರು ಸಂಘ ಸಂಸ್ಥೆಗಳು, ಭಾರತೀಯ ತಟರಕ್ಷಕ ಪಡೆ ಸೇರಿದಂತೆ ಹಲವರು ಸೂರ್ವೆಯ ವೆಂಕಣ್ಣ ನಾಯಕರ ಮನೆಗೆ ತೆರಳಿ ಸನ್ಮಾನಿಸಿ ಗೌರವ ಸಲ್ಲಿಸಿದ್ದರು. ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

