Breaking News

ಪಿಎಸ್‌ಐ ಹುದ್ದೆ ನಿರೀಕ್ಷೆಯಲ್ಲಿ ಇರುವವರಿಗೆ ಸಿಹಿ ಸುದ್ದಿ


ಹುಬ್ಬಳ್ಳಿ: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ  ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ  ಘೋಷಣೆ ಮಾಡಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು .ಈಗ ವಾರ್ಷಿಕ‌ 100 ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಶೇ.35 ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇ.12 ಕ್ಕೆ ಇಳಿಕೆ ಮಾಡಲಾಗಿದೆ ಎಂದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *