ತುಮಕೂರು: ಚತುರ್ಥಿ ಸಲುವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಇಂದು ಕೊಂಡೊಯ್ದು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ತುಮಕೂರು ತಾಲೂಕಿನ ಮುದಿಗೆರೆ ಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ತುಮಕೂರಿನ ಭೀಮಸಂದ್ರ ನಿವಾಸಿ ಚೇತನ್ (15) ಸಾವಿಗೀಡಾದ ಯುವಕ.ಇಂದು ಸಂಜೆ ಗಣೇಶ ಮೂರ್ತಿಯನ್ನು ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಸಂದರ್ಭ ನೀರಿನಲ್ಲಿ ಮುಳುಗಿ ಈತ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

