ಬೆಳಗಾವಿ: ಮಾನಸಿಕ ನೊಂದ ಶ್ರೀ ಬಸವ ಸಿದ್ಧಲಿಂಗ ಸ್ವಾಮೀಜಿ ಮಠಕೆ ನೇಣು ಹಾಕಿಕೊಂಡ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳದಲ್ಲಿ ಬೆಳಕಿಗೆ ಬಂದಿದೆ.
ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಿಡಿ ಹೊರ ಬರುತ್ತೆ ಎಂದು ಹೆದರಿಕೊಂಡು ಬೈಲಹೊಂಗಲ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.
ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ಸಾವಿಗೆ ಕೊರಳೊಡ್ಡಿದ್ದಾರೆ. ಇಬ್ಬರು ಮಹಿಳೆಯರ ವೈರಲ್ ಆಡಿಯೋದಲ್ಲಿ ಸ್ವಾಮೀಜಿ ಹೆಸರು ಕೇಳಿ ಬಂದಿತ್ತು. ಮುರುಘಾಶ್ರೀ ಲೈಂಗಿಕ ಕಿರುಕುಳ ಕೇಸ್ ಬೆನ್ನಲ್ಲೇ ಆಡಿಯೋ ವೈರಲ್ ಆಗಿತ್ತು. ಈ ಆಡಿಯೋ ಬಯಲಾದ ನಂತರ ಸ್ವಾಮೀಜಿಗಳು ಆತಂಕಗೊಂಡಿದ್ರಾ ಎಂಬ ಪ್ರಶ್ನೆ ಕಾಡುತ್ತಿದೆ. ಮಡಿವಾಳೇಶ್ವರ ಮಠಕ್ಕೆ ಬೈಲಹೊಂಗಲ ಠಾಣೆ ಪೊಲೀಸರ ಭೇಟಿ ಕೊಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

