Breaking News

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : 35ಕ್ಕೂ ಹೆಚ್ಚು ಕಡೆ ದಾಳಿ


ಕೊಡಗು: ಬೆಳ್ಳಂಬೆಳಗ್ಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಫೀಲ್ಡಿಗೆ ಇಳಿದಿದ್ದು, 35ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನ ಎನ್​ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ.

ಪ್ರವೀಣ್ ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡದ ಮಾಹಿತಿ ಎಂಬ ಮಾಹಿತಿ ಸಿಕ್ಕಿದ್ಯಂತೆ. ಸ್ಥಳೀಯ ಮಟ್ಟದಲ್ಲಿ ಸಂಘಟನೆಗಳ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ ಎನ್ನಲಾಗಿದೆ. ಈ ಎಲ್ಲಾ ಕಾರಣಗಳಿಂದ ಎನ್‌ಐಎ ತಂಡ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ದಾಳಿ ಮಾಡಿ, ತನಿಖೆಯನ್ನ ಬಿರುಸುಗೊಳಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *