Breaking News

ವಿದ್ಯುತ್ ತಂತಿ ತಗಲಿ ಇಬ್ಬರು ಸಾವು


ಬೆಳಗಾವಿ: ತಾಲ್ಲೂಕಿನ ಸುಳಗಾ ಗ್ರಾಮದಲ್ಲಿ ಸೋಮವಾರ ಸಂಜೆ ಮಳೆ ನೀರು ಸೋರದಂತೆ ಮನೆ ಮಾಳಿಗೆ ಮನೆಯ ಮೇಲೆ ತಗಡಿನ ಪತ್ರಾಗಳನ್ನು ಹಾಕುವ ವೇಳೆ ವಿದ್ಯುತ್‌ ತಂತಿ ತಗಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಸುಳಗಾ ನಿವಾಸಿ ವಿನಾಯಕ ಕೃಷ್ಣ ಕಾಲಖಾಂಬಕರ (25), ಬೆನಕನಹಳ್ಳಿ ನಿವಾಸಿ ವಿಲಾಸ ಗೋ‍ಪಾಲ ಅಗಸಗೇಕರ (57) ಮೃತಪಟ್ಟವರು.

ವಿನಾಯಕ ಅವರ ಮನೆ ಮಳೆಯಿಂದಾಗಿ ಸೋರುತ್ತಿತ್ತು. ಈಗಾಗಲೇ ಇದ್ದ ತಗಡಿನ ಚಾವಣಿ ಮೇಲೆ ಹೊಸ ತಗಡುಗಳನ್ನು ಹಾಕಲು ವಿನಾಯಕ ಹಾಗೂ ವಿಲಾಸ ಚಾವಣಿ ಮೇಲೆ ಹತ್ತಿದ್ದರು. ಇವರಿಗೆ ಇನ್ನೊಬ್ಬ ಯುವಕ ನೆರವಾಗಿದ್ದರು. ಮನೆ ಮೇಲೆ ಹಾದು ಹೋದ ವಿದ್ಯುತ್‌ ತಂತಿಗೆ ತಗಡು ಸಿಕ್ಕಿಕೊಂಡಿದ್ದರಿಂದ ಅದರ ಮೂಲಕ ವಿದ್ಯುತ್‌ ಪ್ರವಹಿಸಿ, ಇಬ್ಬರೂ ಕ್ಷಣ ಮಾತ್ರದಲ್ಲೇ ಮೃತಪಟ್ಟರು. ನೆರವಿಗೆ ಬಂದಿದ್ದ ಇನ್ನೊಬ್ಬ ವ್ಯಕ್ತಿಗೂ ವಿದ್ಯುತ್‌ ತಂತಿ ತಗಲಿದ್ದರಿಂದ ಕೆಳಗೆ ಬಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *