ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಜಡಿಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅನೇಕ ನದಿ ತೊರೆಗಳು ತುಂಬಿ ಹರಿಯುತ್ತಿರುವುದರೊಂದಿಗೆ ಕೆರೆಗಳೂ ಕೋಡಿಹರಿದಿದ್ದು ಅಪಾರ ಪ್ರಮಾಣದ ಆಸ್ತಿಪಾಸ್ತಿ, ಬೆಳೆಹಾನಿ ಸಂಭವಿಸಿದೆ.
ಮಾತ್ರವಲ್ಲದೆ ಮಳೆ ಸಂಬಂಧಿ ಕಾರಣಗಳಿಗೆ ಮೂವರು ಬಲಿಯಾಗಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ.
ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು ಜನರು ಮನೆಯಿಂದ ಹೊರಗೆ ಕಾಲಿಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರೂ ಎಲ್ಲೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಇನ್ನು ವಿಜಯಪುರ, ಬಾಗಲಕೋಟೆ ಮತ್ತು ಕೊಡಗು ಜಿಲ್ಲೆಗಳ ಕೆಲವೆಡೆ ಸಾಧಾರಣ ಮತ್ತು ತುಂತುರು ಮಳೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

