ಖ್ಯಾತ ಕ್ರಿಕೆಟಿಗ ಕೆ.ಎಲ್. ರಾಹುಲ್, ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಅವರ ಪುತ್ರಿ ಅತಿಯಾ ಶೆಟ್ಟಿ ಜೊತೆ ಪ್ರೀತಿಯಲ್ಲಿ ಬಿದ್ದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದೀಗ ಇವರಿಬ್ಬರ ಮದುವೆ ದಿನಾಂಕ ಫಿಕ್ಸ್ ಆಗಿದೆ ಎನ್ನಲಾಗಿದ್ದು, ಈ ವರ್ಷದ ಅಂತ್ಯದಲ್ಲಿ ಅಥವಾ 2023ರ ಜನವರಿಯಲ್ಲಿ ವೈವಾಹಿಕ ಬದುಕಿಗೆ ಕಾಲಿಡಲಿದ್ದಾರೆ ಎಂದು ತಿಳಿದುಬಂದಿದೆ.
ಮುಂಬೈ ಹೊರ ವಲಯದಲ್ಲಿರುವ ಸುನಿಲ್ ಶೆಟ್ಟಿ ಅವರ ಖಂಡಾಲ ಬಂಗಲೆಯಲ್ಲಿ ಇವರಿಬ್ಬರ ವಿವಾಹ ನೆರವೇರಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ಆರಂಭವಾಗಿವೆ ಎನ್ನಲಾಗಿದೆ. ವಿವಾಹವನ್ನು ಮೊದಲಿಗೆ ಪಂಚತಾರಾ ಹೋಟೆಲ್ ನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತಾದರೂ ರಾಹುಲ್ ಹಾಗೂ ಅತಿಯಾ ಖಂಡಾಲ ಬಂಗಲೆಯನ್ನೇ ಆಯ್ಕೆ ಮಾಡಿಕೊಂಡರು ಎಂದು ಹೇಳಲಾಗಿದೆ.
ಇತ್ತೀಚೆಗಷ್ಟೇ ಮುಂಬೈನ ಬಾಂದ್ರಾದಲ್ಲಿರುವ ಹೊಸ ಅಪಾರ್ಟ್ಮೆಂಟ್ ಗೆ ಈ ಜೋಡಿ ಶಿಫ್ಟ್ ಆಗಿದ್ದು, ವಿವಾಹ ಸಮಾರಂಭಕ್ಕೆ ದಿನಗಣನೆ ಆರಂಭವಾಗಿದೆ. ಏಷ್ಯಾ ಕಪ್ ಪಂದ್ಯಕ್ಕೂ ಮುನ್ನ ಚಿಕಿತ್ಸೆಗಾಗಿ ರಾಹುಲ್ ವಿದೇಶಕ್ಕೆ ತೆರಳಿದ್ದ ವೇಳೆ ಅತಿಯಾ ಕೂಡ ಸಾಥ್ ನೀಡಿದ್ದರು. ಇವರಿಬ್ಬರ ವಿವಾಹ ವದಂತಿ ಕೇಳಿ ಬಂದಾಗ ಮಾಧ್ಯಮದರ ಪ್ರಶ್ನೆಗೆ ಉತ್ತರಿಸಿದ್ದ ಸುನಿಲ್ ಶೆಟ್ಟಿ, ಇಬ್ಬರೂ ಪ್ರಾಪ್ತ ವಯಸ್ಕರಿದ್ದಾರೆ. ಅವರೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

