ಬೆಂಗಳೂರು : ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಈ ಹಿಂದೆ ಸುರಿದ ಮಳೆಯ ಪರಿಣಾಮದಿಂದ ಆದ ಅನಾಹುತಗಳೇ ಇನ್ನೂ ಸರಿಯಾಗಿಲ್ಲ.
ಬೆಂಗಳೂರಿನಲ್ಲಿ ಇನ್ನೂ 3 ದಿನ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನಲ್ಲಿ ಇಂದಿನಿಂದ (ಸೆ. 7) ಸೆ. 9ರವರೆಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಸೆಪ್ಟೆಂಬರ್ 9 ಅಂದರೆ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಬೆಂಗಳೂರು, ಕರಾವಳಿ ಕರ್ನಾಟಕದ 3 ಜಿಲ್ಲೆಗಳು ಮತ್ತು ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಹಳದಿ ಎಚ್ಚರಿಕೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

