Breaking News

ಗಣಪತಿ ವಿಸರ್ಜಿಸಿ ವೇಳೆ ವಿದ್ಯುತ್ ತಗಲಿ 3 ಜನ ಸಾವು


ಚಿಕ್ಕಮಗಳೂರು : ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಮೂವರು ಸಾವನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ರಾಜು (47) ರಚನಾ (35) ಪಾರ್ವತಿ (26) ಸಾವನಪ್ಪಿದ್ದಾರೆ. ಗಂಭೀರ ಗಾಯಗೊಂಡ ಆರು ಜನ ಮೂಡಿಗೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಭೀರ ಗಾಯಗೊಂಡ ಸಂಗೀತ, ಪಲ್ಲವಿ ಹಾಸನಕ್ಕೆ ರವಾನಿಸಲಾಗಿದೆ. ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *