Breaking News

ತಂದೆಯ ಸಮಾಧಿ ಪಕ್ಕದಲ್ಲೇ ಉಮೇಶ್​ ಕತ್ತಿ ಅಂತ್ಯಕ್ರಿಯೆ


ಬೆಳಗಾವಿ: ಮಂಗಳವಾರ ರಾತ್ರಿ ಹೃದಯಘಾತದಿಂದ ನಿಧನರಾಗಿರುವ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ಏರ್​​ಲಿಫ್ಟ್ ಮಾಡಲಾಗುತ್ತಿದೆ. ತಂದೆಯ ಸಮಾಧಿ ಪಕ್ಕದಲ್ಲೇ ಉಮೇಶ್​ ಕತ್ತಿ ಅಂತ್ಯಕ್ರಿಯೆ ನಡೆಯಲಿದ್ದು ಈ ಹಿನ್ನೆಲೆ ಎರಡು ಎಕರೆ ಕಬ್ಬು ಕಟಾವು ಮಾಡಲಾಗಿದೆ.

ಏರ್ ಅಂಬುಲೆನ್ಸ್ ಮೂಲಕ ಬೆಳಗಾವಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತಿದೆ. ಅಲ್ಲಿಂದ ಹುಕ್ಕೇರಿಯ ಬೆಲ್ಲದ ಬಾಗೇವಾಡಿಗೆ ರವಾನೆ ಮಾಡಲಾಗುತ್ತದೆ. ಮಧ್ಯಾಹ್ನ ಎರಡು ಗಂಟೆವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದಲ್ಲಿರುವ ತಂದೆ ವಿಶ್ವನಾಥ್ ಅವರ ಸಮಾಧಿ ಪಕ್ಕದಲ್ಲಿಯೇ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ನಡೆಸಲು ತೀರ್ಮಾನಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *