Breaking News

ರಾಜ್ಯದಲ್ಲಿ 592 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ


ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 592 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 889 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 18 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.3.7 ರಷ್ಟು ದಾಖಲಾಗಿದೆ.

ಸೋಮವಾರಕ್ಕೆ ಹೋಲಿದರೆ ಸೋಂಕು ಪರೀಕ್ಷೆ 6 ಸಾವಿರ ಹೆಚ್ಚು ನಡೆಸಲಾಗಿದೆ. ಹೀಗಾಗಿ, ಹೊಸ ಪ್ರಕರಣಗಳು 108 ಏರಿಕೆಯಾಗಿವೆ. (ಸೋಮವಾರ 484, ಪ್ರಕರಣಗಳು, ಸಾವು ಎರಡು).

ಶಿವಮೊಗ್ಗದಲ್ಲಿ 55 ವರ್ಷದ ಪುರುಷ, ಕಲಬುರಗಿಯಲ್ಲಿ 76 ವರ್ಷದ ವೃದ್ಧೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಸಕ್ರಿಯ ಸೋಂಕಿತರ ಸಂಖ್ಯೆ 4573 ಇದ್ದು, ಈ ಪೈಕಿ 33 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5 ಮಂದಿ ಐಸಿಯು, 5 ಮಂದಿ ಆಕ್ಸಿಜನ್‌, 23 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 4,550 ಮಂದಿ ಮನೆ ಆರೈಕೆಯಲ್ಲಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *