ಚೆನ್ನೈ: 2024ರ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಇಂದು ಕನ್ಯಾಕುಮಾರಿಯಿಂದ ಪಕ್ಷದ ‘ಭಾರತ್ ಜೋಡೋ ಯಾತ್ರೆ’ಗೆ ಚಾಲನೆ ನೀಡಲಿದ್ದಾರೆ.
3,500 ಕಿಲೋಮೀಟರ್ ದೂರ ಸಾಗಲಿರುವ ಯಾತ್ರೆ ಸುಮಾರು 150 ದಿನಗಳಲ್ಲಿ ಕ್ರಮಿಸಲಿದೆ. ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ತಮ್ಮ ತಂದೆ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡುವ ಮೂಲಕ ರಾಹುಲ್ ಗಾಂಧಿ ತಮ್ಮ ದಿನವನ್ನು ಆರಂಭಿಸಿದರು. 1991 ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ್ದರು. ತಮ್ಮ ತಂದೆಯ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ಟ್ವೀಟ್ ಮಾಡಿದ ರಾಹುಲ್ ಗಾಂಧಿ, “ದ್ವೇಷ ಮತ್ತು ವಿಭಜನೆಯ ರಾಜಕಾರಣದಿಂದ ನಾನು ನನ್ನ ತಂದೆಯನ್ನು ಕಳೆದುಕೊಂಡೆ. ನನ್ನ ಪ್ರೀತಿಯ ದೇಶವನ್ನು ನಾನು ಕಳೆದುಕೊಳ್ಳುವುದಿಲ್ಲ. ಪ್ರೀತಿ ಗೆಲ್ಲುತ್ತದೆ” ಎಂದು ಬರೆದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

