Breaking News

ದೊಡ್ಡ ಪ್ರಮಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಂತರ ರಾಜ್ಯ ಆರೋಪಿಗಳ ಬಂಧನ..!

ಹುಬ್ಬಳ್ಳಿ: ಗಾಂಜಾ ಸಾಗಾಟ ಮಾಡುತಿದ್ದ ಅಂತರ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಠಾಣೆ ಪೊಲೀಸರು ಯಶಸ್ವಿ ಆಗಿದ್ದಾರೆ.

ಹುಬ್ಬಳ್ಳಿಯ ಕೇಶ್ವಾಪೂರ್ ಹತ್ತಿರ ಸಿಇಎನ್ ಪೊಲೀಸರು ಪೆಟ್ರೋಲಿಂಗ ಮಾಡುತ್ತಿರುವಾಗ ಆಂದ್ರಪ್ರದೇಶ ಮೂಲದ ಇನ್ನೋವಾ ಕಾರೊಂದು ಸಂಶಯಾಸ್ಪದವಾಗಿ ನಿಂತುರುದನ್ನು ಕಂಡು ಪೊಲೀಸರು ಕಾರನ್ನು ಪರಿಶೀಲಿಸುತ್ತಾರೆ, ಆಗ ಕಾರಿನಲ್ಲಿ ದೊಡ್ಡ ಪ್ರಮಾಣದ ಗಾಂಜಾ ಸಾಗಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಸಿಇಎನ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್‌ ಹಾಗೂ ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಕಾರಿನಲ್ಲಿದ್ದ ಬರೋಬ್ಬರಿ 61 ಕಿಲೋ 636 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಇನ್ನೋವಾ ಕಾರನ್ನು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಸಿಕ್ಕಿಬಿದ್ದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಜೈಲಿಗೆ ಕಳಿಸಿದ್ದಾರೆ. ಈ ಒಂದು ಕಾರ್ಯಾಚರಣೆಯಲ್ಲಿ ಸಿಇಎನ್ ಪೊಲೀಸ ಇನ್ಸ್ಪೆಕ್ಟರ್ ಎಮ್. ಎಸ್. ಹೂಗಾರ, ಪಿ ಎಸ್ ಐ ರಮೇಶ್ ಪಾಟೀಲ್, ಸಿಬ್ಬಂದಿಗಳಾದ ಸಂಜು ಕುರಹಟ್ಟಿ, ಸಿ ಎಂ ಕಂಬಾಲಿಮಠ, ಫಕ್ಕಿರೇಶ್ ಸುಣಗಾರ, ಗಿರೀಶ್ ಬಡಿಗೇರ್ ಹಾಗೂ ಸಿಬ್ಬಂದಿಗಳು ಪಾಲಗೊಂಡಿದ್ದರು. ತಂಡದ ಈ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರಾದ ಲಬು ರಾಮ ಅವರು ಶ್ಲಾಘಿಸಿದ್ದಾರೆ.

Share News

About BigTv News

Check Also

ಅಯ್ಯೋ ಪಾಪ ಅಂದಿದ್ದೇ ತಪ್ಪಾಯ್ತು: ಎಂಬಿಬಿಎಸ್ ವಿದ್ಯಾರ್ಥಿನಿ ಸ್ನೇಹಿತೆಯ ಸೋಗಿನಲ್ಲಿ ಒಂದು ಲಕ್ಷ ರೂ. ವಂಚನೆ!

ವಿದೇಶದಲ್ಲಿ ಎಂಬಿಬಿಎಸ್‌ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯ ಕಾಲೇಜು ಶುಲ್ಕ ಪಾವತಿಸುವ ತುರ್ತು ಪರಿಸ್ಥಿತಿಯನ್ನು ಬಳಸಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಕುಟುಂಬವೊಂದಕ್ಕೆ …

Leave a Reply

Your email address will not be published. Required fields are marked *