Breaking News

ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ವತಿಯಿಂದ108 108 ಅರ್ಚಕರು, ಪುರೋಹಿತರಿಗೆ ಸನ್ಮಾನ

ಹುಬ್ಬಳ್ಳಿ: ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ವತಿಯಿಂದ ದಿ. ವಿಶ್ವಪ್ರಕಾಶ್ ಉಳ್ಳಾಗಡ್ಡಿಮಠ ಅವರ ಸ್ಮರಣಾರ್ಥ ಹುಬ್ಬಳ್ಳಿಯ ಮೂರುಸಾವಿರಮಠದ ಆವರಣದಲ್ಲಿ 108 ಅರ್ಚಕರು, ಪುರೋಹಿತರಿಗೆ ಸನ್ಮಾನಿಸಲಾಯಿತು.

ಫೌಂಡೇಶನ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಮೂರುಸಾವಿರಮಠದ ಡಾ.ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೇರವೇರಿದ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧೆಡೆಯ ಪುರೋಹಿತ, ಅರ್ಚಕರಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.

ನಂತರ ಮಾತನಾಡಿದ ಮೂರುಸಾವಿರಮಠದ ಶ್ರೀಗಳು, ರಜತ್ ಉಳ್ಳಾಗಡ್ಡಿಮಠ ಫೌಂಡೇಶನ್ ಕಳೆದ ಒಂದೂವರೆ ವರ್ಷಗಳಿಂದ ಹಲವಾರು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬರುತ್ತಿದೆ. ಅದರಂತೆ ಇದೀಗ ಧಾರ್ಮಿಕ ವಿಧಿವಿಧಾನ ಮಾಡುವ ವೈದಿಕರನ್ನು ಗೌರವಿಸಿದ್ದಾರೆ. ವೈದಿಕರು ಆರ್ಥಿಕವಾಗಿ ಅಷ್ಟು ಸಬಲರಾಗಿಲ್ಲ. ಅಂತವರನ್ನು ಪ್ರೋತ್ಸಾಹಿಸುತ್ತಿರುವುದು ಖುಷಿಯ ಸಂಗತಿ ಎಂದರು.

ಈ ಸಂದರ್ಭದಲ್ಲಿ ಚಾರ್ಟೆಡ್ ಅಕೌಂಟೆಂಟ್ ಎನ್.ಎ.ಚರಂತಿಮಠ, ನಿವೃತ್ತ ಎಕ್ಸಿಸ್ ಅಧಿಕಾರಿ ಎಂ.ಎ.ಹಿರೇಮಠ, ಪ್ರಕಾಶ ಕಿರಕಟ್ಟಿ, ಹೂವಪ್ಪ ದಾಯಿಗೋಡಿ, ಗೋಪಾಲ ಯೆನ್ನಿಚುವಾಡಿ, ಅಶೋಕ ಕಲಾದಗಿ, ಪ್ರಕಾಶ ಮಾಯಕರ, ಬಾಳಮ್ಮ ಜಂಗಿನ್ನವರ, ಜಸ್ವಂತ ಗಾಣದಾಳ, ಮರ್ದನ ಮಕಾಂದರ ಇತರರು ಇದ್ದರು.ಸೇರಿದಂತೆ ಮುಂತಾದವರು ಇದ್ದರು‌.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *