Breaking News

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ : ಯುವಕ ಸಾವು


ಗದಗ: ಗಣೇಶ ವಿಸರ್ಜನೆ ವೇಳೆ ಚಾಕು ಇರಿತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಗದಗದ ತೋಂಟದಾರ್ಯ ಮಠದ ಬಳಿ ತಡರಾತ್ರಿ ನಡೆದಿದೆ.

ಚಾಕು ಇರಿತಕ್ಕೆ ಒಳಗಾದ ಸುದೀಪ್ ಮುಂಡೆವಾಡಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಸ್ನೇಹಿತರೇ ಹಲ್ಲೆ ಮಾಡಿ ಚಾಕು ಇರಿದು ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ತೀವ್ರ ರಕ್ತಸ್ರಾವದಿಂದ ಸುದೀಪ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗದಗದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಂಗಾಕೂಟ ಸರ್ಕಲ್ ನಲ್ಲಿ ತಡರಾತ್ರಿ ಹೈಡ್ರಾಮಾ ನಡೆದಿದೆ. ಘಟನೆಯ ನಂತರ ಡಿಜೆ ಬಂದ್ ಮಾಡಲು ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಅನುಮತಿ ನೀಡಬೇಕೆಂದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ತಡರಾತ್ರಿ ಒಂದು ಗಂಟೆಯಾದ್ದು, ಡಿಜೆ ಬಂದ್ ಮಾಡಬೇಕು ಎಂದು ಪೊಲೀಸರು ಹೇಳಿದ್ದು ಅನುಮತಿ ನೀಡಬೇಕೆಂದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ನಂತರ ಡಿಜೆ ಹಾಕಿ ಮೆರವಣಿಗೆ ಮಾಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *