Breaking News

ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನ : ಸಿಎಂ


ಬೆಂಗಳೂರು :  ನಗರದ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರತ್ಯೇಕ ಪ್ರಾಧಿಕಾರ ರಚಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವಿಧಾನಸಭೆಯಲ್ಲಿ ಮಸೂದೆಯನ್ನು ಮಂಡಿಸಿ, ಕಾಯ್ದೆ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ಕೇಂದ್ರದ ಭೂ ಸಂಪರ್ಕ ಮತ್ತು ಹೆದ್ದಾರಿಗಳ ಸಚಿರ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಸಿಎಂ ನಂತ್ರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಬಿಬಿಎಂಪಿ, ಬಿಡಿಎ, ಬಿಎಂಆರ್ ಡಿಎ, ಲೋಕೋಪಯೋಗಿ ಇಲಾಖೆ ಗಳಿಂದ ಹಲವು ಕಾಮಗಾರಿಗಳು ನಡೆಯುತ್ತಿರುತ್ತವೆ. ಈ ಬಗ್ಗೆ ಸಮಗ್ರ ಮಾಸ್ಟರ್ ಪ್ಲಾನ್ ರೂಪಿಸಿದರೆ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ. ಈ ಎಲ್ಲ ಸಂಸ್ಥೆಗಳ ಜೊತೆಗೆ ರೈಲ್ವೆ , ಮಟ್ರೋ ವನ್ನು ಒಳಗೊಂಡಂತೆ ಬೆಂಗಳೂರು ಮತ್ತು ಬೆಂಗಳೂರು ಸುತ್ತಮುತ್ತಲಿನ ಸಂಚಾರ ದಟ್ಟಣೆಯ ನಿರ್ವಹಣೆಗೆ ಪ್ರಾಧಿಕಾರವನ್ನು ರಚನೆ ಮಾಡಲಾಗುವುದು ಎಂದು ಅವರು ತಿಳಿಸಿದರು.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *