Breaking News

ಕೇಂದ್ರ ಸಚಿವ ಅಮಿತ್ ಶಾಗೆ ರೈತರಿಗೆ ಸಿಹಿ ಸುದ್ದಿ


ನವದೆಹಲಿ: ಮುಂದಿನ 5 ವರ್ಷಗಳಲ್ಲಿ 3 ಲಕ್ಷ ಪ್ರಾಥಮಿಕ ಕೃಷಿ ಸಾಲ ಸಂಘಗಳನ್ನು ಸ್ಥಾಪಿಸಲಾಗುವುದು ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿಯಲ್ಲಿ ಎರಡು ದಿನಗಳ ರಾಜ್ಯ ಸಹಕಾರ ಸಚಿವರ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಸಮಗ್ರ ಅಭಿವೃದ್ಧಿಗಾಗಿ ರಾಷ್ಟ್ರೀಯ ಸಹಕಾರಿ ನೀತಿ ರೂಪಿಸಲು ಸಮಿತಿ ರಚಿಸಲಾಗಿದೆ.ಪ್ರತಿ ರಾಜ್ಯವು ಅದರಲ್ಲಿ ಪ್ರಾತಿನಿಧ್ಯ ಹೊಂದಿರುತ್ತದೆ. ಮಾಜಿ ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಸಮಿತಿಯ ಮುಖ್ಯಸ್ಥರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಉಚಿತ ನೋಂದಣಿ, ಗಣಕೀಕರಣ ಮತ್ತು ಪ್ರಜಾಸತ್ತಾತ್ಮಕ ಚುನಾವಣೆಗಳು ನೀತಿಯ ಕೇಂದ್ರಬಿಂದುವಾಗಿದೆ. ಸಕ್ರಿಯ ಸದಸ್ಯತ್ವ, ನಾಯಕತ್ವದಲ್ಲಿ ವೃತ್ತಿಪರತೆ ಮತ್ತು ಪಾರದರ್ಶಕತೆ, ಜವಾಬ್ದಾರಿಯುತ ಮತ್ತು ಉತ್ತರದಾಯಿತ್ವ ಮತ್ತು ಎಲ್ಲಾ ಚರ್ಚೆಗಳನ್ನು ಮಧ್ಯಸ್ಥಗಾರರೊಂದಿಗೆ ನಡೆಸಲಾಗುತ್ತದೆ ಎಂದು ಹೇಳಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *