ಕರ್ನಾಟಕದ 10 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸೆ. 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು , ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ , ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ.
ಕರ್ನಾಟಕದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ ಇನ್ನು ಕೆಲವು ಜಿಲ್ಲೆಗಳಿಗೆ ಇಂದಿನಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದಿನಿಂದ ಸೆ. 11ರವರೆಗೆ ‘ಹಳದಿ ಅಲರ್ಟ್’ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

