Breaking News

ಎಂ ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ


ಬೆಂಗಳೂರು: ಕೆಲ ದಿನಗಳ ಹಿಂದೆ ಮಾಜಿ ಪರಿಷತ್ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ , ಕಾಂಗ್ರೆಸ್ ಪಕ್ಷಕ್ಕೆ  ರಾಜೀನಾಮೆ ನೀಡಿ ಹೊರ ನಡೆದಿದ್ದರು. ಇದೀಗ ಅವರು ಸೆ.10 ರ ಇಂದು ಅಧಿಕೃತವಾಗಿ ಬಿಜೆಪಿ  ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 10-09-2022ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11.30ಕ್ಕೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.

ಅಂದಹಾಗೇ ದಿನಾಂಕ 31-08-2022ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪತ್ರಬರೆದಿದ್ದಂತ ಅವರು, ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು, ಸ್ವಇಚ್ಛೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ತಿಳಿಸಿದ್ದರು. ಈ ಬಳಿಕ ಇದೀಗ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರೋದಾಗಿ ಘೋಷಣೆ ಮಾಡಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *