ಹುಬ್ಬಳ್ಳಿ : ಪ್ರವಾಹದಿಂದ ಹಾನಿಯುಂಟಾದ ಪ್ರದೇಶಗಳಿಗೆ ಭೇಟಿ ನೀಡ್ತಿದ್ದೇನೆ. ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ ವಿಚಾರ. ಬಿಜೆಪಿಯವರು ಅಡಬಿಟ್ಟಿ ಹಣದಲ್ಲಿ ಮತ್ತು ಲಂಚದ ಹಣದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡ್ತಿದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು.
ರಾಜ್ಯದಲ್ಲಿ ಮಳೆ ಬಂದು ಸಾಕಷ್ಟು ಸಮಸ್ಯೆ ಆಗಿದೆ. ಸುಮಾರು 7 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿದೆ. ಬೆಂಗಳೂರಿನಲ್ಲೂ ಸಹ ಮಳೆಯಿಂದಾಗಿ ಸಮಸ್ಯೆಯಾಗಿದೆ. ಇದಕ್ಕೆಲ್ಲ ಈ ಭ್ರಷ್ಟಾಚಾರದ ಬಿಜೆಪಿ ಸರ್ಕಾರ ಕಾರಣ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಲಂಚ ಹೊಡೆದಿರೋ ದುಡ್ಡಿನಲ್ಲಿ ಬಿಜೆಪಿಯವರು ಕಾರ್ಯಕ್ರಮ ಮಾಡ್ತಿದಾರೆ. ಸಂಕಷ್ಟದಲ್ಲಿರೋ ಜನರಿಗೆ ಸ್ಪಂದನೆ ಮಾಡೋದು ಬಿಟ್ಟು ಡ್ಯಾನ್ಸ್ ಮಾಡ್ತಿದಾರೆ.
ಉಮೇಶ ಕತ್ತಿಯವರು ಉತ್ತರ ಕರ್ನಾಟಕದ ರಾಜಕಾರಣಿ, ಅವರದ್ದೇ ಪಕ್ಷದ ಪ್ರಭಾವಿ ರಾಜಕಾರಣಿ. ಅವರ ನಿಧನದ ಹಿನ್ನೆಲೆ ಒಂದು ಕಡೆ ಶೋಕಾಚರಣೆ ಮಾಡ್ತೀವಿ ಅಂತಾರೆ ಇನ್ನೊಂದು ಕಡೆ ಡ್ಯಾನ್ಸ್ ಮಾಡ್ತಾರೆ. ಬಿಜೆಪಿಯವರಿಗೆ ಜನರ ಬಗ್ಗೆ ಖಾಳಜಿ ಇಲ್ಲ ದುಡ್ಡು ಹೊಡೆಯೋದ್ರಲ್ಲಿ ಮಾತ್ರ ಖಾಳಜಿ ಇದೆ.
ಪಿಎಸ್ ಐ ಹಗರಣದಲ್ಲಿ ಶಾಸಕ ಬಸವರಾಜ ದಡೇಸಗೂರು ಹಣ ಪಡೆದ ಬಗ್ಗೆ ತಾವೇ ಒಪ್ಪಿಕೊಂಡಿದ್ದಾರೆ. ಆತನ ವಿರುದ್ಧ ಎಫ್ ಐಆರ್ ದಾಖಲು ಮಾಡಿ ತನಿಖೆ ನಡೆಸಬೇಕು. ಬಿಜೆಪಿ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಸಿದ್ಧರಾಮಯ್ಯ. ಪ್ರಿಯಾಂಕ್ ಖರ್ಗೆ ಮಾತನಾಡಿದ್ರೆ ನೋಟೀಸ್ ಕೊಡ್ತಾರೆ ಆದ್ರೆ ಅವರ ಶಾಸಕ ಸ್ವತ ಒಪ್ಪಿಕೊಂಡ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿಯವರು ಪ್ರತಿಯೊಂದು ವಿಷಯದಲ್ಲೂ ಸೇಡಿನ ರಾಜಕೀಯ ಮಾಡ್ತಿದಾರೆ. ದಾವಣಗೆರೆಯಲ್ಲಿ ನಡೆದ ನನ್ನ ಜನ್ಮದಿನಾಚರಣೆ ಪ್ರತ್ಯುತ್ತರವಾಗಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮ ಮಾಡುತ್ತಿದ್ದಾರೆ. ನನ್ನ ಜನ್ಮದಿನಾಚರಣೆಗೆ ಜನ ತಾವಾಗೇ ಬಂದ್ರು ಆದ್ರೆ ಜನಸ್ಪಂದನಕ್ಕೆ ದುಡ್ಡು ಕೊಟ್ಟು ಕರೆಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.
ಎಸಿಬಿ ರದ್ದು ಪಡಿಸಿ ಲೋಕಾಯುಕ್ತ ಮರು ರಚನೆ ಮಾಡಿರುವುದಕ್ಕೆ ನಾವು ಸ್ವಾಗತ ಮಾಡಿದ್ದೇವೆ. ನ್ಯಾಯಾಲಯದಿಂದಲೇ ಆದೇಶವಿದೆ ಹೀಗಾಗಿ ಸ್ವಾಗತ ಮಾಡಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

