Breaking News

ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಕೆಲಸ



ಬೆಂಗಳೂರು: ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಘೋಷಣೆ ಮಾಡಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ಈ ಮಹತ್ವ ಘೋಷಣೆ ಮಾಡಿದ್ದಾರೆ.ತಮ್ಮ ಭಾಷಣವನ್ನು ಮುಗಿಸಿ ವೇದಿಕೆಯ ಮೇಲೆ ಕುತಿದ್ದ ಸಿಎಂ ಬಳಿಕ ಪುನಃ ಬಂದು ಈ ಘೋಷಣೆಯನ್ನು ಮಾಡಿದ್ದಾರೆ. ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ನೆರವು ನೀಡುತ್ತೇವೆ. ಪ್ರವೀಣ್ ನೆಟ್ಟಾರು ಅವರು ಬಿಜೆಪಿ ಕಾರ್ಯಕರ್ತ. ಇದರಿಂದಾಗಿ ಕೆಲಸ ಕೊಡುವುದು ನಮ್ಮ ಕರ್ತವ್ಯ. ಸಿಎಂ ಕಚೇರಿಯಲ್ಲೇ ಕೆಲಸ ನೀಡುತ್ತೇನೆ ಎಂದು ಭರವಸೆ ನೀಡಿದರು.

ಪಕ್ಷದ ಹಿರಿಯ ನಾಯಕರ ಸಲಹೆ ಮೇರೆಗೆ ರ್ಯಾಲಿಯನ್ನು ರದ್ದುಗೊಳಿಸುವ ನಿರ್ಧಾರ ಕೈಗೊಂಡಿದ್ದರಿಂದ ಬಿಜೆಪಿ ತನ್ನನ್ನು ತಾನು ಕಾರ್ಯಕರ್ತರ ಪಕ್ಷ ಎಂದು ಸಾಬೀತುಪಡಿಸಿದೆ ಎಂದು ರ್ಯಾಲಿಯನ್ನು ಆಯೋಜಿಸಿದ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರಾದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *