Breaking News

ಸೋನಿಯಾ ಗಾಂಧಿಗೆ ಶಾಕ್ ಕೊಟ್ಟ ಕಾಂಗ್ರೆಸ್ ಸಂಸದರು


ನವದೆಹಲಿ : ಸದ್ಯದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟದ ಕಾಲವನ್ನು ಎದುರಿಸುತ್ತಿದೆ. ಇತ್ತೀಚೆಗೆ ಹಿರಿಯ ನಾಯಕರು ಒಬ್ಬೊಬ್ಬರಾಗಿ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಿದ್ದಾರೆ.

ಇತ್ತೀಚೆಗೆ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಕೂಡ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಈ ಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನಾಯಕತ್ವದ ಧೋರಣೆ ಟೀಕೆಗೆ ಗುರಿಯಾಗಿದೆ.ಈ ಎಲ್ಲಾ ಬೆಳವಣಿಗೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆ ಅಕ್ಟೋಬರ್ 17ರಂದು ನಡೆಯಲಿದ್ದು ಭಾರೀ ಕುತೂಹಲ ಕೆರಳಿಸಿದೆ. ಐವರು ಕಾಂಗ್ರೆಸ್ ಸಂಸದರು ಎಐಸಿಸಿ ಚುನಾವಣಾ ಮುಖ್ಯಸ್ಥ ಮಧುಸೂಧನ್ ಮಿಸ್ತ್ರಿ ಅವರಿಗೆ ಪತ್ರ ಬರೆದಿರುವುದು ರಾಜಕೀಯವಾಗಿ ಬಾರಿ ಚರ್ಚೆಗೆ ಗ್ರಾಸವಾಗಿದೆ. ಆದರೆ, ಕಾಂಗ್ರೆಸ್ ಪಕ್ಷದ ಲೋಕಸಭಾ ಸಂಸದರಾದ ಶಶಿತರೂರ್, ಮನೀಶ್ ತಿವಾರಿ, ಕಾರ್ತಿ ಚಿದಂಬರಂ, ಪ್ರದ್ಯುತ್ ಬೋರ್ದೊಲೈ, ಅಬ್ದುಲ್ ಖಾಲಿಕ್ ಅವರು ಪಕ್ಷದ ಅಧ್ಯಕ್ಷರ ಆಯ್ಕೆಯನ್ನು ಪಾರದರ್ಶಕವಾಗಿ ನಡೆಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *